ಮಣಿಪುರದ ಬಗ್ಗೆ ನಿನ್ನೆ ಅಮಿತ್ ಶಾ ವಿಸ್ತಾರವಾಗಿ ಎಲ್ಲ ಹೇಳಿದ್ದಾರೆ. ಅಮಿತ್ ಶಾ ಮಾತಿನ ಬಳಿಕ ವಿಪಕ್ಷಗಳು ಎಷ್ಟು ಸುಳ್ಳು ಹೇಳಿವೆ ಎಂದು ಬಯಲಾಗಿದೆ. ಮಣಿಪುರದಲ್ಲಿ ಹಿಂಸಾಚಾರ ಶುರುವಾದಗಿನಿಂದ ಬಹಳಷ್ಟು ಜನರು ತಮ್ಮವರನ್ನು ಕಳೆದುಕೊಂಡಿದ್ದಾರೆ. ಮಹಿಳೆಯರ ಜೊತೆಗೆ ಕೆಟ್ಟದಾಗಿ ನಡೆದುಕೊಳ್ಳಲಾಗಿದೆ. ತಪ್ಪಿತಸ್ಥರಿಗೆ ಶಿಕ್ಷಿಸುವ ಕೆಲಸ ಸರ್ಕಾರ ಮಾಡಲಿದೆ. ಮಾತುಕತೆ ನಡೆಯುತ್ತಿದೆ, ಶಾಂತಿ ಮರುಕಳಿಸಲಿದೆ. ಮಣಿಪುರ ಜನರಲ್ಲೂ ಮನವಿ, ದೇಶ ನಿಮ್ಮ ಜೊತೆಗೆ ಇದೆ, ಸದನ ನಿಮ್ಮ ಜೊತೆಗಿದೆ. ಎಲ್ಲರೂ ಸೇರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೋಣ, ಪ್ರಜಾಪ್ರಭುತ್ವ, ಸಂವಿಧಾನ ಹತ್ಯೆ ಬಗ್ಗೆ ಮಾತನಾಡುವ ಜನರು ಇಂದು ಭಾರತ ಮಾತೆಯ ಹತ್ಯೆಯ ಬಗ್ಗೆ ಮಾತನಾಡುತ್ತಿದ್ದಾರೆ. ಅಗಸ್ಟ್ 14 ದೇಶ ವಿಭಜನೆಯ ದಿನ, ಭಾರತಮಾತೆಯನ್ನು ಮೂರು ಭಾಗಗಳಾಗಿ ಒಡೆದವರು ಇವರೇ. ಇವರು ಯಾವ ಬಾಯಿಯಿಂದ ಮಾತನಾಡುವ ಧೈರ್ಯ ಮಾಡುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು.