ಏಷ್ಯನ್ ಚಾಂಪಿಯನ್ಷಿಪ್ ಹಾಕಿ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಂತೆ ಮೆರೆದಿರುವ ಭಾರತ ಹಾಕಿ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 4-0 ಅಂತರದ ಜಯ ದಾಖಲಿಸಿದೆ. ಈ ಮೂಲಕ ಟೂರ್ನಿಯಲ್ಲಿ ಟ್ರೋಫಿ ಗೆಲ್ಲುವ ಫೇವರಿಟ್ ಎನಿಸಿರುವ ಹರ್ಮನ್ ಪ್ರೀತ್ ಸಿಂಗ್ ಬಳಗ ಸೆಮಿಫೈನಲ್ ಪಂದ್ಯದಲ್ಲಿ ಅಪಾಯಕಾರಿ ಜಪಾನ್ ಎದುರು ಪೈಪೋಟಿ ನಡೆಸಲಿದೆ.
ಇದೇ ವರ್ಷ ನಡೆಯಲಿರುವ ಏಷ್ಯನ್ ಗೇಮ್ಸ್ 2023 ಟೂರ್ನಿಗೆ ಈ ಮೂಲಕ ಭಾರತ ಹಾಕಿ ತಂಡ ಭರ್ಜರಿ ತಯಾರಿ ಕೈಗೊಂಡಿದೆ.
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ)4-0 ಮುನ್ನಡೆಯೊಂದಿಗೆ ಹಿಡಿತ ಸಾಧಿಸಿದೆ. ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಹರ್ಮನ್ಪ್ರೀತ್ ಸಿಂಗ್ ಎರಡು ಗೋಲು ಗಳಿಸಿದರೆ, ಜುಗರಾಜ್ ಸಿಂಗ್ ಮತ್ತು ಅಮನ್ದೀಪ್ ಸಿಂಗ್ ತಲಾ ಒಂದು ಗೋಲು ಗಳಿಸಿ ಮಿಂಚಿದರು