ಹಣದ ಬದಲಿಗೆ ಹೆಚ್ಚುವರಿಯಾಗಿ 5 ಕೆಜಿ ಆಂಧ್ರದ ಅಕ್ಕಿ ವಿತರಣೆ: ಸಚಿವ ಮುನಿಯಪ್ಪ

ಬೆಂಗಳೂರು ;- ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ ಲಭ್ಯವಾಗಿದ್ದು, ಹಣದ ಬದಲಿಗೆ ಹೆಚ್ಚುವರಿಯಾಗಿ 5 ಕೆಜಿ ಆಂಧ್ರದ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.

ಈ ಕುರಿತಾಗಿ ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಅವರೊಂದಿಗೆ ಆಂಧ್ರಪ್ರದೇಶದ ಆಹಾರ ಇಲಾಖೆ ಸಚಿವ ಕಾರುಮುರಿ ವೆಂಕಟನಾಗೇಶ್ವರರಾವ್ ನೇತೃತ್ವದ ನಿಯೋಗ ಚರ್ಚೆ ನಡೆಸಿದೆ.

ಬೆಂಗಳೂರಿನಲ್ಲಿ ಉಭಯ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದ್ದು, ಎಫ್‌ಸಿಐ ನಿಗದಿಪಡಿಸಿದ ದರದಲ್ಲಿ ಅಕ್ಕಿ ಪೂರೈಕೆ ಮಾಡಲು ಅವಕಾಶ ನೀಡುವ ಜೊತೆಗೆ ನಿರ್ದಿಷ್ಟ ಪ್ರಮಾಣವನ್ನು ತಿಳಿಸಬೇಕು. ಆದಷ್ಟು ಬೇಗನೆ ಅನುಮತಿ ನೀಡಿದಲ್ಲಿ ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ನಿಯೋಗ ಹೇಳಿದೆ.

ನಿಯೋಗದ ಜತೆ ವಿಸ್ತೃತ ಚರ್ಚೆ ನಡೆಸಿದ ಸಚಿವ ಮುನಿಯಪ್ಪ, ಮಾತುಕತೆಯ ವಿವರಗಳ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಿ ಒಪ್ಪಿಗೆ ಪಡೆದು ನಿಮಗೆ ಮಾಹಿತಿ ನೀಡುವುದಾಗಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

 

Loading

Leave a Reply

Your email address will not be published. Required fields are marked *