ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ರಾತ್ರಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆದ್ದರಿಂದ ಅನಾರೋಗ್ಯದಿಂದ ಬಳಲುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದರು.
ಭಾನುವಾರ ತಡರಾತ್ರಿ ರಾಜ್ಯಪಾಲರಿಗೆ ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಬಳಿಕ ಚಿಕಿತ್ಸೆ ಪಡೆದು ರಾಜ ಭವನಕ್ಕೆ ಗೆಹ್ಲೋಟ್ ಮರಳಿದ್ದಾರೆ ರಾತ್ರಿ 10 ಗಂಟೆ ಸುಮಾರಿಗೆ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾದ ರಾಜ್ಯಪಾಲ ಗೆಹ್ಲೋಟ್ ಅವರು ಡಿಲಕ್ಸ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆದು ರಾತ್ರಿ 12.50ಕ್ಕೆ ರಾಜ ಭವನಕ್ಕೆ ಮರಳಿದ್ದಾರೆ