ಬೆಂಗಳೂರು: ವಸಾಹತುವಾದ ಮತ್ತು ಸಾಮ್ರಾಜ್ಯವಾದಗಳು ಜೀವಂತವಾಗಿದ್ದಾಗ ಸ್ವಾತಂತ್ರ್ಯಗಳಿಸಿದರೆ ಸಾಕು ಅಭಿವೃದ್ಧಿ ಎಂಬುದು ತನ್ನಿಂದ ತಾನೆ ಸಾಧ್ಯವಾಗುತ್ತದೆ ಎಂದು ಭಾವಿಸಿ ನಮ್ಮ ಹಿರಿಯರು ಹೋರಾಟ ಮಾಡಿದ್ದರು. ಇದು ಸತ್ಯ ಕೂಡ ಆಗಿತ್ತು ಸ್ವಾತಂತ್ರ್ಯವೇನೂ ಲಭಿಸಿತು. ಆದರೆ, ನವ ಉದಾರವಾದಿ ನೀತಿಗಳು ಜಗತ್ತಿನಾದ್ಯಂತ ಪ್ರಾರಂಭವಾದ ಮೇಲೆ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಹೆಚ್ಚಾಗುತ್ತಾ ಹೋಯಿತು. ಇಂದು ನಮ್ಮಲಿಯೇ ಶೇ.10 ರಷ್ಟು ಜನ ಶೇ.78 ಕ್ಕಿಂತ ಹೆಚ್ಚಿನ ಪ್ರಮಾಣದ ಸಂಪತ್ತಿನ ಮೇಲೆ, ಯಜಮಾನಿಕೆ ಹೊಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.