ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ನಡೆಯುತ್ತಿರುವ ಮಳೆಯ (Rain) ಅವಾಂತರಕ್ಕೆ 71 ಜನರು ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಮಳೆಯಿಂದಾದ ದುರ್ಘಟನೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈಗಿಂತ ಆಗಸ್ಟ್ 13, 14 ಹಾಗೂ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ ಹೆಚ್ಚಿನ ಹಾನಿ ಸಂಭವಿಸಿದೆ. ಸಾವಿನ ಸಂಖ್ಯೆ 71 ತಲುಪಿದ್ದು, ಸುಮಾರು 7,500 ಕೋಟಿ ರೂ. ನಷ್ಟವಾಗಿದೆ. ಜನರು ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಲ್ಲಿ ತೊಡಗಿರುವುದರಿಂದ ಈ ಅಂದಾಜು ಹೆಚ್ಚುವ ಸಾಧ್ಯತೆಯಿದೆ ಎಂದು ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು, ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ರಾಜ್ಯ ವಿಪತ್ತು ನಿರ್ವಹಣಾ ನಿಧಿ (SDRF) ಹಾಗೂ ಸ್ಥಳೀಯ ಜನರು ಸೇರಿದಂತೆ ಸ್ಥಳಾಂತರ ಕಾರ್ಯವನ್ನು ಬೃಹತ್ ಪ್ರಮಾಣದಲ್ಲಿ ನಡೆಸಲಾಗುತ್ತಿದೆ. ಸುಮಾರು 2,500 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ.