ಮಿಜೋರಾಂ: ಸೈರಾಂಗ್ ನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಬುಧವಾರ ಬೆಳಗ್ಗೆ ಐಜ್ವಾಲ್ ಸಮೀಪದ ಸಾಯಿರಾಂಗ್ನಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದಿದೆ. ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಅವರು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ ಎನ್ನುವ ಕುರಿತು ಮಾಹಿತಿ ನೀಡಿದ್ದಾರೆ.
ಐಜ್ವಾಲ್ ಬಳಿಯ ಸಾಯಿರಂಗ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದೆ, ಕನಿಷ್ಠ 15 ಕಾರ್ಮಿಕರು ಮೃತಪಟ್ಟಿದ್ದಾರೆ, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಈ ದುರಂತದಿಂದ ತೀವ್ರವಾಗಿ ದುಃಖಿತನಾಗಿದ್ದೇನೆ, ಕುಟುಂಬ ಸದಸ್ಯರನ್ನು ಕಳೆದುಕೊಂಡ ಎಲ್ಲರಿಗೂ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಝೋರಂತಂಗ ಟ್ವೀಟ್ ಮಾಡಿದ್ದಾರೆ.