ರಾಜ್ಯದ ಸಾಹಿತಿಗಳಿಗೆ ಜೀವ ಬೆದರಿಕೆ: ಸೂಕ್ತ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ನಾಡಿನ ಅರಿವನ್ನು ವಿಸ್ತರಿಸುತ್ತಿರುವ ಹಲವಾರು ಲೇಖಕರು ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ತಮ್ಮನ್ನು ಭೇಟಿ ಮಾಡಿದ ಹಿರಿಯ ಸಾಹಿತಿಗಳು, ಲೇಖಕರು ಮತ್ತು ಹೋರಾಟಗಾರರ ನಿಯೋಗಕ್ಕೆ ಈ ಭರವಸೆ ನೀಡಿದರು.

ಹಿರಿಯ ಸಾಹಿತಿ ಡಾ.ಕೆ ಮರುಳಸಿದ್ದಪ್ಪ ಅವರು ಮಾತನಾಡಿ ಹಲವಾರು ಸಾಹಿತಿಗಳಿಗೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ನಿರಂತರವಾಗಿ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಸಾಹಿತಿಗಳು . ಆತಂಕ, ಮುಜುಗರದಿಂದ ಬದುಕುವ ಪರಿಸ್ಥಿತಿ ಉಂಟಾಗಿದೆ ಎಂದು ಹಲವು ಪ್ರಕರಣಗಳನ್ನು ಉದಾಹರಿಸಿದರು.

ಕುಂ.ವೀರಭದ್ರಪ್ಪ, ಡಾ:ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಅವರುಗಳಿಗೆ ಅತಿ ಹೆಚ್ಚು ಬೆದರಿಕೆಗಳು ಬಂದಿವೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದ, ವಾತಾವರಣ ಸೃಷ್ಟಿಯಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಅವರಿಗೆ ಒದಗಿದ ಗತಿ ಒದಗಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಬೆದರಿಕೆ ಪತ್ರಗಳ ಬಗ್ಗೆ ಒಂದು ತಂಡ ರಚಿಸಿದ್ದು, ಇನ್ನಷ್ಟು ಪರಿಣಾಮಕಾರಿ ಯಾಗಿರುವ, ವೃತ್ತಿಪರವಾಗಿರುವ ಖಡಕ್ ಅಧಿಕಾರಿಗಳ ಪೊಲೀಸ್ ತಂಡವನ್ನು ರಚಿಸಬೇಕು ಎಂದರು. ಸಾರ್ವಜನಿಕ ಪ್ರತಿಭಟನೆಗಳನ್ನು ಸ್ವಾತಂತ್ರ್ಯ ಉದ್ಯಾನವನಕ್ಕೆ ಮಾತ್ರ ಸೀಮಿತಗೊಳಿಸಿದ್ದು, ಇತರೆಡೆ ಪ್ರತಿಭಟನೆ ಮಾಡಲು ಇರುವ ನಿಷೇಧವನ್ನು ತೆಗೆಯಬೇಕೆಂದು ಮನವಿ ಮಾಡಿದರು.

Loading

Leave a Reply

Your email address will not be published. Required fields are marked *