ತುಮಕೂರು: ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಸಹಾಯಕ ಸರ್ವೆಯರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲಾಧಿಕಾರಿ ಆವರಣದಲ್ಲಿ ನಡೆದಿದೆ. ಮಹೇಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. 6 ರಿಂದ7 ವರ್ಷ ಕೆಲಸ ಮಾಡುತ್ತಿರುವ ಸಹಾಯಕ ಸರ್ವೆಯರ್ ಮಹೇಶ್ ಮೇಲೆ ಸರ್ವೆ ಮೇಲ್ವಿಚಾರಕಿ ಕವಿತಾ ಎಂಬುವವರು ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಹೌದು, ಸರಿಯಾಗಿ ಕೆಲಸ ಮಾಡಿಲ್ಲ ಎಂದು ಮಹೇಶ್ಗೆ ಟಾರ್ಚರ್ ನೀಡುತ್ತಿದ್ದಾರೆ ಎಂದು ಮಹೇಶ್ ಆರೋಪಿಸಿ ಡೆತ್ನೋಟ್ ಬರೆದಿಟ್ಟು, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಈ ಘಟನೆ ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.