Bhuvan Ponnanna-Harshika Poonacha: ಕೊಡವ ಶೈಲಿಯಲ್ಲಿ ಮದುವೆಯಾದ ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಣ್ಣ

ಸ್ಯಾಂಡಲ್‌ವುಡ್ ಚಿಟ್ಟೆ ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ (Bhuvan Ponnanna) ಇಂದು (ಆಗಸ್ಟ್ 24) ಕೊಡಗಿನಲ್ಲಿ (Kodava) ಅದ್ದೂರಿಯಾಗಿ ಮದುವೆಯಾಗಿದ್ದಾರೆ. 12 ವರ್ಷಗಳ ಪ್ರೀತಿಗೆ ಇದೀಗ ಮದುವೆಯ ಮುದ್ರೆ ಒತ್ತಿದ್ದಾರೆ. ಇಂದು ಗುರುಹಿರಿಯರ ಸಮ್ಮುಖದಲ್ಲಿ ನಟಿ ಹರ್ಷಿಕಾ(Harshika Poonacha)- ಭುವನ್ ಕೊಡವ ಪದ್ಧತಿಯಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗಿನ ವಿರಾಟ್‌ಪೇಟೆಯಲ್ಲಿ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ಜರುಗಿದೆ. ಕೊಡವ ಲುಕ್‌ನಲ್ಲಿ ನವಜೋಡಿ ಮಿಂಚಿದ್ದಾರೆ.

ಮದುವೆಯೂ ಮುನ್ನವೇ ಜೋಡಿಯಾಗಿ ಹರ್ಷಿಕಾ-ಭುವನ್ ಗೃಹಪ್ರವೇಶ ನೆರವೇರಿತ್ತು. ಆಗಸ್ಟ್ 23ರಂದು ಊರ್ಕುಡುವ ಶಾಸ್ತ್ರ ನಡೆದಿತ್ತು. ಇದೀಗ ಮದುವೆಯಾಗಿರೋ ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರಿದ್ದಾರೆ. ಹರ್ಷಿಕಾ ದಂಪತಿಯ ಮದುವೆಗೆ ಮಾಜಿ ಸಿಎಂ ಬಿಎಸ್‌ವೈ, ನಟ ತಬಲಾ ನಾಣಿ ಕೂಡ ಹಾಜರಿ ಹಾಕಿದ್ದಾರೆ.

ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಮಾತನಾಡಿದ್ದರು.

Loading

Leave a Reply

Your email address will not be published. Required fields are marked *