ಕಾಂಗ್ರೆಸ್ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗಲ್ಲ.  ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಸೋಲಿನ ಭೀತಿ ಇದೆ. ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸೀಟು ಬರಲ್ಲ ಅಂತ ಮಾಹಿತಿ ಇದೆ. ಹೆಚ್ಚು ಸೀಟ್​ ಗೆಲ್ಲದಿದ್ದರೇ ಕಾಂಗ್ರೆಸ್ ಸರ್ಕಾರದ ಭವಿಷ್ಯಕ್ಕೆ ಸಮಸ್ಯೆ ಇದೆ. ಹೀಗಾಗಿ ರಾಜ್ಯದಲ್ಲಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಪಕ್ಷ ಕೈಹಾಕಿದೆ. ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Loading

Leave a Reply

Your email address will not be published. Required fields are marked *