ಕಾವೇರಿ ನದಿ ನೀರಿನ ಹಂಚಿಕೆ ಸಂಕಷ್ಟ ಸೇರಿದಂತೆ ಎಲ್ಲಾ ವಿಚಾರಗಳಲ್ಲೂ ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ದವಾಗಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಭಾರತ ಸರ್ಕಾರದ ಆಹಾರ ಸಂಸ್ಕರಣಾ ಮಂತ್ರಾಲಯ , ಕರ್ನಾಟಕ ರಾಜ್ಯ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ , ಕರ್ನಾಟಕ ಕೃಷಿ ವಾಣಿಜ್ಯ ಅಭಿವೃದ್ಧಿ ನಿಗಮ, ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಭಾಗಿತ್ವದಲ್ಲಿ ಮಂಡ್ಯದ ಡಾ.ರಾಜ್ ಕುಮಾರ್ ಬಡಾವಣೆ ಮೈದಾನದಲ್ಲಿ ಏರ್ಪಡಿಸಿದ್ದ ಸಿರಿಧಾನ್ಯ ಮೇಳ, ವಸ್ತು ಪ್ರದರ್ಶನ ಹಾಗೂ ಬೆಲ್ಲದ ಪರಿಷೆ ಉದ್ಘಾಟಿಸಿ ಅವರು ಮಾತನಾಡಿದರು.
ಇಂತಹ ಪರಿಸ್ಥಿತಿಯಲ್ಲಿ ಕಾವೇರಿ ನದಿ ನೀರಿನ ಹಂಚಿಕೆಗೆ ಸಂಕಷ್ಟ ಸೂತ್ರ ಬೇಕು. ರಾಜ್ಯದ ರೈತರನ್ನು ಉಳಿಸುವುದು ನಮ್ಮ ಜವಾಬ್ದಾರಿ ಅದನ್ನು ನಿರ್ವಹಿಸುತ್ತೇವೆ ಎಂದರು. ಕಡಿಮೆ ನೀರಿನ ಬಳಕೆ ಮೂಲಕ ಕೃಷಿ ಮಾಡುವುದು,
ಅಂತರ್ಜಲ ಹೆಚ್ಚಿಸುವ ಪ್ರಯತ್ನಗಳನ್ನೂ ನಾವು ಮಾಡಬೇಕಿದೆ. ಕೃಷಿ ಹೊಂಡ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು. ರೈತರ ಬದುಕು ಹಸನಾಗಬೇಕೆಂಬುದು ನಮ್ಮ ಆಶಯ ಅದಕ್ಕೆ ಪೂರಕವಾದ ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ಎನ್.ಚಲುವರಾಯಸ್ವಾಮಿ ಹೇಳಿದರ
ಜಿಲ್ಲೆಯ ಜನರು, ಸ್ವಾಮೀಜಿಯವರು ಹಾಗೂ ಪಕ್ಷದ ವರಿಷ್ಠರ ಆಶೀರ್ವಾದದಿಂದ ಸ್ವಾತಂತ್ರ್ಯಾ ನಂತರ ಮಂಡ್ಯ ಜಿಲ್ಲೆಗೆ ಇದೇ ಮೊದಲ ಬಾರಿಗೆ ಕೃಷಿ ಸಚಿವ ಸ್ಥಾನ ದೊರೆತಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಇಂದು ಸಿರಿ ಧಾನ್ಯದ ಬಗ್ಗೆ ವಿಶ್ವದಲ್ಲೇ ವ್ಯಾಪಕ ಚರ್ಚೆ ನಡೆಯುತ್ತಿದೆ ಹಿಂದೊಮ್ಮೆ ಬಡವರ ಆಹಾರವಾಗಿದ್ದ ಸಿರಿಧಾನ್ಯ ಇಂದು ಸರಿವಂತರ ಆಯ್ಕೆಯಾಗುತ್ತಿದೆ . ಪ್ರಪಂಚದ ಅತ್ಯಂತ ಅವಶ್ಯಕ ಧಾನ್ಯ ವಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.