ಸುಳ್ಳು ಸುದ್ದಿ ಹರಡುವವರನ್ನು ಇವುಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು: ಡಿ.ಕೆ. ಶಿವಕುಮಾರ್

ಬೆಂಗಳೂರು:“ಸರ್ಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಪ್ರಿಯಾಂಕ್ ಖರ್ಗೆ ಅವರ ಜತೆ ನಮ್ಮ ಪಕ್ಷದ ಪ್ರಣಾಳಿಕೆ ಹಾಗೂ ಇತರೆ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಎನ್ ಆರ್ ಐ ವಿಚಾರ, ಬೆಂಗಳೂರಿನಲ್ಲಿ ಉಚಿತ ವೈ-ಫೈ ವಲಯ ನಿರ್ಮಾಣ ಸಂಬಂಧ ಸಭೆಯ ದಿನಾಂಕ ಪ್ರಕಟಿಸುತ್ತೇವೆ” ಎಂದು ತಿಳಿಸಿದರು.

ಸುಳ್ಳು ಸುದ್ದಿ ನಿಯಂತ್ರಣ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಸುಳ್ಳು ಸುದ್ದಿ ಹರಡುವವರನ್ನು ನಿಯಂತ್ರಿಸಲು ಗೃಹ ಇಲಾಖೆ, ಐಟಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಸುಳ್ಳು ಸುದ್ದಿಯಿಂದ ಕೋಮುಗಲಭೆ, ಗದ್ದಲ, ಗೌರವಕ್ಕೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಇವುಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

Loading

Leave a Reply

Your email address will not be published. Required fields are marked *