ವಿದ್ಯಾರ್ಥಿಗಳು ಶಾಲೆಗಳಿಗೆ ಮೊಬೈಲ್ ತರುವುದನ್ನ ನಿಷೇಧಿಸಿ ಶಿಕ್ಷಣ ಇಲಾಖೆ

ಅಮರಾವತಿ: ಆಂಧ್ರ ಪ್ರದೇಶ ಸರ್ಕಾರ (Andhra Pradesh Government) ರಾಜ್ಯಾದ್ಯಂತ ಶಾಲೆಗಳಲ್ಲಿ ಮೊಬೈಲ್‌ ಫೋನ್‌ ಬಳಕೆಯನ್ನ ನಿಷೇಧಿಸಿದೆ. ವಿದ್ಯಾರ್ಥಿಗಳು ಶಾಲೆಗಳಿಗೆ ಮೊಬೈಲ್‌ ತರುವುದನ್ನ ನಿಷೇಧಿಸಿ ಶಿಕ್ಷಣ ಇಲಾಖೆ (Education Departments) ಆದೇಶ ಹೊರಡಿಸಿದೆ.

ಅಲ್ಲದೇ ತರಗತಿಗಳಲ್ಲಿ ಶಿಕ್ಷಕರೂ ಸಹ ಮೊಬೈಲ್‌ ಫೋನ್‌ (Mobile Phones) ಬಳಸುವುದನ್ನ ಶಿಕ್ಷಣ ಇಲಾಖೆ ನಿಷೇಧಿಸಿದೆ. ತರಗತಿಗಳಿಗೆ ಹೋಗುವ ಮುನ್ನ ಶಿಕ್ಷಕರು ತಮ್ಮ ಮೊಬೈಲ್‌ಗಳನ್ನು ಮುಖ್ಯಶಿಕ್ಷಕರ ಬಳಿ ಕೊಟ್ಟು ಹೋಗಬೇಕು ಎಂದು ಸೂಚಿಸಿದೆ.

ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ (UNESCO) ಜಾಗತಿಕ ಶಿಕ್ಷಣ ಮೇಲ್ವಿಚಾರಣಾ ವರದಿಗೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಶಿಕ್ಷಕರಿಂದ ಮಕ್ಕಳಿಗೆ ಉಂಟಾಗುವ ತೊಂದರೆ ತಪ್ಪಿಸಲು ಶಿಕ್ಷಕರೂ ತರಗತಿಗಳಲ್ಲಿ ಮೊಬೈಲ್‌ ಬಳಸುವುದನ್ನ ನಿಷೇಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ವಿಶ್ವಸಂಸ್ಥೆಯು ಶಾಲೆಗಳಲ್ಲಿ ಫೋನ್‌ ಬಳಕೆಯನ್ನ ನಿಷೇಧಿಸಿದೆ. ಡೇಟಾ ಗೌಪ್ಯತೆ, ಸುರಕ್ಷತೆ ಮತ್ತು ಮಗುವಿನ ಯೋಗಕ್ಷೇಮ ಕಾಳಜಿಯಿಂದ ಜಾಗತೀಕವಾಗಿ ನಾಲ್ಕು ದೇಶಗಳಲ್ಲಿ ಈ ಕ್ರಮ ಅನುಷ್ಠಾನಕ್ಕೆ ಬಂದಿದೆ. ಇದನ್ನ ಮಾದರಿಯಾಗಿ ತೆಗೆದುಕೊಂಡಿರುವ ಶಿಕ್ಷಣ ಇಲಾಖೆ ಆಂಧ್ರ ಪ್ರದೇಶದ ಶಾಲೆಗಳಲ್ಲಿಯೂ ಮೊಬೈಲ್‌ ಬಳಕೆಗೆ ನಿಷೇಧ ಹೇರಿದೆ.

Loading

Leave a Reply

Your email address will not be published. Required fields are marked *