ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಪುಂಗಿ ಊದಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಎಡವಿದ್ದೂ ಅಲ್ಲದೆ ಇಂದಿಗೂ ಅವುಗಳನ್ನು ಸರಿಯಾಗಿ ಜಾರಿ ಮಾಡಲಾಗಲಿಲ್ಲ. ಗ್ಯಾರಂಟಿಗಳ ಅನುಷ್ಠಾನಕ್ಕೂ ಮೊದಲೇ ರಾಜ್ಯದಲ್ಲಿ ಶುರುವಾಗಿದ್ದು ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ದರ್ಬಾರ್.
ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.
ಉನ್ನತ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಜತೆಗೆ ಸಭೆ ನಡೆಸಿ ಅಧಿಕಾರ ಚಲಾಯಿಸಿದ್ದರು. ಈ ಮೂಲಕ ರಾಜ್ಯದ ಬೊಕ್ಕಸದಿಂದ ಕಾಂಗ್ರೆಸ್ ಹೈಕಮಾಂಡ್‌ಗೆ ಸಂದಾಯವಾದದ್ದು ಎಷ್ಟು ಎಂಬುದನ್ನು ಎಲ್ಲವನ್ನೂ ತಿಳಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ತಿಳಿಸಬೇಕಷ್ಟೆ ಎಂದು ಬಿಜೆಪಿ ಟ್ವೀಟ್ ಮಾಡಿ ಹರಿಹಾಯ್ದಿದೆ.
ಗ್ಯಾರಂಟಿಗಳಿಗೆ ಹಣವಿಲ್ಲದೆ ಸಿದ್ದರಾಮಯ್ಯ ಪತರಗುಟ್ಟಿ ಹೋಗಿದ್ದಾರೆ. ಸಚಿವರು ಅಕ್ರಮ ದಂಧೆಗಳಿಗೆ ನಾಂದಿಯಾಡಿದರು. ತನ್ನ ಹಿಂದಿನ ಹಳೆಯ ವೈಖರಿಯಂತೆ ಮರಳು ಮಾಫಿಯಾ ಜಾರಿಗೆ ತಂದಿತು. ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ತವರು ಜಿಲ್ಲೆಯಲ್ಲೇ ಮರಳು ಮಾಫಿಯಾ ನಡೆಯುತ್ತಿದೆ. ಕಾನ್ಸ್ಟೇಬಲ್ ಮೇಲೆ ಮರಳು ಮಾಫಿಯಾ ಟ್ರ್ಯಾಕ್ಟರ್ ಹರಿಸಿ ಬಲಿ ಪಡೆಯಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರುಗಳ ದೌಲತ್ತು, ಧಿಮಾಕುಗಳು ಜೋರಾಯಿತು. ಆಯಾ ಜಿಲ್ಲೆಗಳಲ್ಲಿ ಅಕ್ರಮ ದಂಧೆಗಳು ತಲೆ ಎತ್ತಲಾರಂಭಿಸಿದವು. ಅಸಲಿಗೆ ತುಘಲಕ್ ದರ್ಬಾರ್‌ಗೆ ಕಡಿವಾಣವೇ ಇಲ್ಲದಂತಾಯಿತು ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.