ಮೈಸೂರು: ಇಡೀ ದೇಶದಲ್ಲಿ ಬದಲಾವಣೆಯ ಗಾಳಿ ಬೀಸಿದೆ. ಇದೇ ಭೂಮಿ ಮೇಲೆ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡಿದ್ದರು. ಭಾರತ್ ಜೋಡಿ ಯಾತ್ರೆ ವೇಳೆ ಜನ ಎಲ್ಲಾ ಸಮಸ್ಯೆ ಹೇಳಿಕೊಂಡಿದ್ದರು. ನಮ್ಮ ಸರ್ಕಾರ ಬಂದು 100 ದಿನ ಆಗಿದೆ. ನಾವು ನುಡಿದಂತೆ ನಡೆದಿದ್ದೇವೆ. ನಾನು ಹಾಗೂ ಸಿದ್ದರಾಮಯ್ಯನವರು ನಮ್ಮ ನಾಡ ದೇವತೆಗೆ ನಮಿಸಿದ್ದೇವೆ. ನೂರು ದಿನಗಳಲ್ಲಿ ಕಾಂಗ್ರೆಸ್ನ ಗ್ಯಾರಂಟಿಗಳನ್ನು ನಾವು ಅನುಷ್ಠಾನ ಮಾಡಿದ್ಧೇವೆ.
ಘೋಷಣೆ ಮಾಡಿದಂತೆ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತಿದ್ದೇವೆ. ಬೆಳಗಾವಿಯಲ್ಲಿ ಗೃಹಜ್ಯೋತಿ ಯೋಜನೆ ಘೋಷಣೆ ಮಾಡಿದ್ದೆವು. ಬಳಿಕ ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆ ಘೋಷಣೆ ಮಾಡಿದ್ದೆವು. ಅಧಿಕಾರಕ್ಕೆ ಬಂದ ನೂರು ದಿನದಲ್ಲಿ ನಾಲ್ಕು ಗ್ಯಾರಂಟಿ ಜಾರಿ ಮಾಡಿದ್ದೇವೆ. ಇಡೀ ದೇಶದಲ್ಲೇ ಕರ್ನಾಟಕ ಮಾದರಿ ಎಂದು ತೋರಿಸಿದ್ದೇವೆ. 1.10 ಕೋಟಿ ಫಲಾನುಭವಿಗಳು ಗೃಹಲಕ್ಷ್ಮೀ ಹಣ ಪಡೆಯುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.