ಮೈಸೂರು: ಚುನಾವಣೆಯ ಮುಂಚೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಘೋಷಿಸಿತ್ತು. ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಈಡೇರಿಸಿದೆ. ಇವತ್ತು ನಾವು ಈ ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮನೆಯ ಯಜಮಾನಿಯ ಖಾತೆಗೆ ಹಣ ಸಂದಾನ ಆಗಿದೆ. ಪ್ರತಿ ತಿಂಗಳು 2 ಸಾವಿರ ಹಣ ಜಮೆ ಆಗಲಿದೆ. ಇದು ನಮ್ಮ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭರವಸೆ.
ನಾವು ಹೇಳಿದಂತೆ ರಾಜ್ಯದ ಹೆಣ್ಣು ಮಕ್ಕಳು ಉಚಿತವಾಗಿ ಶಕ್ತಿ ಯೋಜನೆ ಜಾರಿಯಾಗಿದೆ. ಮಹಿಳೆಯರೀಗ ಉಚಿತವಾಗಿ ಸಂಚರಿಸುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡಲಾಗುತ್ತಿದೆ. ಗ್ರಹ ಜ್ಯೋತಿಯಡಿ 200 ಯುನಿಟ್ ವಿದ್ಯುತ್ ನೀಡಲಾಗುತ್ತಿದೆ. ನಮ್ಮ ಐದು ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳು ಮಹಿಳೆಯರಿಗಾಗಿ ಮಾಡಿರುವ ಯೋಜನೆಗಳು ಎಂದು ರಾಹುಲ್ ಎಂದರು.