ನಟ ಶಿವರಾಜ್ ಕೆ.ಆರ್ ಪೇಟೆ ತಂದೆ ವಿಧಿವಶ

ಹಾಸ್ಯ ನಟ ಶಿವರಾಜ್ ಕೆ.ಆರ್ ಪೇಟೆ (Shivaraj K.R.Pete) ಅವರ ತಂದೆ ರಾಮೇಗೌಡ (80) (Ramegowda) ಅವರು ಇಂದು ಕೆ.ಆರ್ ಪೇಟೆ ಸ್ವಗೃಹದಲ್ಲಿ ದೈವಾಧೀನರಾಗಿದ್ದಾರೆ (Passed Away). ಕೆ.ಆರ್.ಪೇಟೆತಾಲೂಕಿನ ಶೀಳನೆರೆ ಹೋಬಳಿಯ ರಾಜಘಟ್ಟ ಗ್ರಾಮದ ನಿವಾಸಿಯಾಗಿದ್ದ ಅವರು ಡ್ರಾಮಾ ಮಾಸ್ಟರ್ ಆಗಿಯೂ ಪ್ರಸಿದ್ಧಿಯಾಗಿದ್ದರು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಮೃತರು ಪತ್ನಿ ಸಾವಿತ್ರಮ್ಮ, ಚಿತ್ರನಟ ಕೆ.ಆರ್.ಪೇಟೆ ಶಿವರಾಜ್ (ಕಾಮಿಡಿ ಕಿಲಾಡಿಗಳು) ಸೇರಿದಂತೆ ನಾಲ್ಕು ಗಂಡು ಮಕ್ಕಳು ಮೂರು ಹೆಣ್ಣುಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಜಿಲ್ಲೆಯಾದಾದ್ಯಂತ ಸಾಕಷ್ಟು ನಾಟಕಗಳಿಗೆ ಅವರ ನಿರ್ದೇಶನವಿದೆ. ಹಾಗಾಗಿ ಅನೇಕ ಶಿಷ್ಯರು ಕೂಡ ಜಿಲ್ಲೆಯಲ್ಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಶುಕ್ರವಾರ ಮಧ್ಯಾಹ್ನ 01 ಘಂಟೆಗೆ ಮೃತರ ಸ್ವಗ್ರಾಮ ರಾಜಘಟ್ಟದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Loading

Leave a Reply

Your email address will not be published. Required fields are marked *