ಬೆಂಗಳೂರು: ಬಿ.ಎಲ್ ಸಂತೋಷ್ ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ. ಬಿಎಸ್ ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು.
ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್! ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.