ಸೂರ್ಯನ ಅಧ್ಯಯನ ಯೋಜನೆ ಯಶಸ್ವಿಯಾಗಲಿ ಎಂದು ವಿಜ್ಞಾನಿಗಳಿಂದ ಪ್ರಾರ್ಥನೆ

ತಿರುಪತಿ: ಚಂದ್ರಯಾನ-3ರ ಯಶಸ್ವಿಯ ಬೆನ್ನಲ್ಲೇ ಸೂರ್ಯನ ಮೇಲೆ ಅಧ್ಯಯನ ನಡೆಸಲು ಆದಿತ್ಯ ಎಲ್ 1 (Aditya L-1) ಮಿಷನ್ ಉಡಾವಣೆಗೆ ಇಸ್ರೋ (ISRO) ಸಜ್ಜಾಗಿದೆ. ಬಾಹ್ಯಾಕಾಶಕ್ಕೆ ನೌಕೆಯನ್ನು ಕಳುಹಿಸಲು ಕ್ಷಣಗಣನೆ ಪ್ರಾರಂಭವಾಗಿದ್ದು, ಇದರ ಯಶಸ್ಸಿಗಾಗಿ ಇಸ್ರೋ ಮುಖ್ಯಸ್ಥರಾದ ಎಸ್ ಸೋಮನಾಥ್ (S Somnath) ಅವರು ತಿರುಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಆದಿತ್ಯ ಎಲ್ 1 ಉಡಾವಣೆಗೂ ಮುನ್ನ ಶುಕ್ರವಾರ ತಿರುಪತಿಯ ಬಾಲಾಜಿ ದೇವಾಲಯಕ್ಕೆ ಭೇಟಿ ನೀಡಿ ಎಸ್ ಸೋಮನಾಥ್ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಸ್ರೋವಿನ ಮುಂದಿನ ಮಿಷನ್ ಬಗ್ಗೆ ಮಾಹಿತಿ ನೀಡಿದ್ದಾರೆ. ಚಂದ್ರಯಾನ-3 ಮಿಷನ್‌ನ ವೈಜ್ಞಾನಿಕ ಪ್ರಯೋಗಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ.

ಆದಿತ್ಯ ಎಲ್ 1 ಶನಿವಾರ ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದೆ. ಈ ಕಾರ್ಯಾಚರಣೆಯು ಗಮ್ಯ ಸ್ಥಾನವನ್ನು ತಲುಪಲು 125 ದಿನಗಳನ್ನು ತೆಗೆದುಕೊಳ್ಳಲಿದೆ. ಬಳಿಕ ಸೂರ್ಯನ ಮೇಲೆ ಅಧ್ಯಯನ ನಡೆಸಲಿದೆ ಎಂದು ಈ ಹಿಂದೆ ಎಸ್ ಸೋಮನಾಥ್ ತಿಳಿಸಿದ್ದಾರೆ.

Loading

Leave a Reply

Your email address will not be published. Required fields are marked *