ಚಿನ್ನ ಖರೀದಿಸುವ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳಿಯರು ಅರೆಸ್ಟ್

ಬೆಂಗಳೂರು;- ನಗರದಲ್ಲಿ ಚಿನ್ನದ ಅಂಗಡಿಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಜೋಡಿಯನ್ನು ಹತ್ತು ವರ್ಷದ ಬಳಿಕ ಈಗ ಪೊಲೀಸರು ಬಂಧಿಸಿದ್ದಾರೆ.

ಚಿನ್ನ ಖರೀದಿಸುವ ನೆಪದಲ್ಲಿ ಜ್ಯುವೆಲರಿ ಶಾಪ್​ಗಳಿಗೆ ಎಂಟ್ರಿ ಕೊಡುವ ಈ ಖತರ್ನಾಕ್​ ಲೇಡಿ ಜೋಡಿ ಮಾಲೀಕನಿಗೆ ತಿಳಿಯದ ಹಾಗೆ ಚಿನ್ನ ಕದ್ದು ಪರಾರಿಯಾಗುತ್ತಿದ್ದರು.

ಕೆಲವೇ ನಿಮಿಷದಲ್ಲಿ ಚಿನ್ನದ ವಸ್ತುಗಳನ್ನು ಕದಿಯುತ್ತಿದ್ದ ಗ್ಯಾಂಗನ್ನು ಸದ್ಯ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಈ ಜೋಡಿ ಹತ್ತು ವರ್ಷದ ಬಳಿಕ ಮತ್ತೆ ಸದ್ದು ಮಾಡಿ ಈಗ ಸಿಕ್ಕಿ ಬಿದ್ದಿದೆ. ರತ್ನ ಪೆರುಮಾಳ್ ಹಾಗೂ ಕೃಷ್ಣವೇಣಿ ಬಂಧಿತ ಆರೋಪಿಗಳು. ಇವರು ಬೆಂಗಳೂರಿನ ಚಿನ್ನದ ಅಂಗಡಿಗಳನ್ನೇ ಟಾರ್ಗೆಟ್​ ಮಾಡುತ್ತಿದ್ದರು.

ಬಂಧಿತ ಮಹಿಳೆಯರು, ನಕಲಿ ಚಿನ್ನದೊಂದಿಗೆ ಚಿನ್ನದ ಅಂಗಡಿಗಳಿಗೆ ಎಂಟ್ರಿ ಕೊಡುತ್ತಿದ್ದರು. ಮಾಲೀಕರ ಗಮನ ಬೇರೆಡೆ ಸೆಳೆದು ನಕಲಿ ಚಿನ್ನವನ್ನಿಟ್ಟು ಅಸಲಿ ಚಿನ್ನದೊಂದಿಗೆ ಎಸ್ಕೇಪ್ ಆಗುತ್ತಿದ್ದರು. ತಮಿಳುನಾಡು ಮೂಲದವರಾದ ಈ ಮಹಿಳೆಯರು ಬೆಂಗಳೂರಿನ ಹಲವೆಡೆ ತಮ್ಮ ಕೈಚಳಕ ತೋರಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದೇವಸ್ಥಾನ, ಸಭೆ-ಸಮಾರಂಭಗಳಲ್ಲೂ ಈ ಆರೋಪಿಗಳು ಕೈಚಳಕ ತೋರಿಸಿದ್ದಾಋಎ. ಬನಶಂಕರಿ ಟೆಂಪಲ್ ಸೇರಿದಂತೆ ಹಲವು ಕಡೆ ಭಕ್ತರಿಗೆ ಗೊತ್ತಾಗದ ಹಾಗೆ ಚಿನ್ನ ಎಗರಿಸಿದ್ದಾರೆ. ಮಹಿಳೆಯರು ಮತ್ತು ಮಕ್ಕಳ ಗಮನ ಬೇರೆಡೆ ಸೆಳೆದು ಸರಗಳ್ಳತನ ಮಾಡಿದ್ದಾರೆ.

ಕರ್ನಾಟಕ ಮಾತ್ರವಲ್ಲದೆ ಅನೇಕ ರಾಜ್ಯಗಳಲ್ಲೂ ತಮ್ಮ ಕೈಚಳಕ ತೋರಿಸಿರುವ ಖ್ಯಾತಿ ಈ ಆರೋಪಿಗಳಿಗೆ ಸಲ್ಲುತ್ತದೆ. ಈಗಲೂ ಹಲವು ಪೊಲೀಸ್ ಠಾಣೆಗಳಿಗೆ ಬೇಕಾಗಿರುವ ಈ ಆರೋಪಿಗಳು, ಬರೊಬ್ಬರಿ 10 ವರ್ಷಗಳ ನಂತರ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಇವರು ಒಮ್ಮೆ ಕದ್ದು ಎಸ್ಕೇಪ್ ಆದ್ರೆ ಮತ್ತೆ ತಿಂಗಳಾನುಗಟ್ಟಲೇ ಕಳ್ಳತನ ಮಾಡುತ್ತಿರಲಿಲ್ಲ. ಬದಲಿಗೆ ಬೇರೆ ರಾಜ್ಯಕ್ಕೆ ಹೋಗಿ ತಮ್ಮ ಕೈಚಳಕ ತೋರಿಸುತ್ತಿದ್ದರು.

 

Loading

Leave a Reply

Your email address will not be published. Required fields are marked *