ವಿಜಯಪುರ: ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಆಲಮಟ್ಟಿಯ ಹೆಲಿಪ್ಯಾಡ್ ಗೆ ಆಗಮಿಸಿದ ಸಿದ್ದರಾಮಯ್ಯ ಕೃಷ್ಣಾ ನದಿಗೆ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಣೆ ಮಾಡಿದರು. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಆಣೆಕಟ್ಟುವಿನಲ್ಲಿ ಕೃಷ್ಣೆಗೆ ಗಂಗಾಪೂಜೆ ಮಾಡಿ, ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಎಂಬಿ ಪಾಟೀಲ್, ಕೃಷ್ಣಭೈರೇಗೌಡ, ಶಿವಾನಂದ ಪಾಟೀಲ್ ಇತರರು ಇದ್ದರು.