ಸಮುದ್ರಂ ಚಿತ್ರ ತಂಡದಿಂದ ಛಾಯಾಗ್ರಾಹಕನ ಮೇಲೆ ಎಫ್ಐಆರ್ ದಾಖಲಾಗಿದೆ ಹೌದು ಅನಿತಾ ಭಟ್ ಮತ್ತು ಶಿವಧ್ವಜ ಕಾಂಬಿನೇಷನ್ ‘ಸಮುದ್ರಂ’ ಸಿನಿಮಾದ ಸಿನಿಮಾಟೋಗ್ರಾಫರ್ ರಿಶಿಕೇಷ್ ವಿರುದ್ಧ ಬೆಂಗಳೂರಿನ ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾಟೋಗ್ರಫರ್ ರಿಶಿಕೇಷ್ ಸಮುದ್ರಂ ಚಿತ್ರದ ಹಾರ್ಡ್ ಡಿಸ್ಕ್ ಕೊಡದೆ ನಿರ್ಮಾಪಕರಿಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಚಿತ್ರತಂಡ ದೂರು ನೀಡಿದೆ.
ರಾಜಲಕ್ಷ್ಮಿ ಸಿನಿ ಕ್ರಿಯೇಷನ್ ನಿರ್ಮಾಣ ಮತ್ತು ಅನಿತಾ ಭಟ್ ಕ್ರಿಯೇಷನ್ ಹಾಗೂ ಡಾಟ್ ಟಾಕೀಸ್ ಸಹಯೋಗದಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ.
ಚಿತ್ರದ ಸಂಗೀತ, ಡಬ್ಬಿಂಗ್, ರೀ ರೆಕಾರ್ಡಿಂಗ್, ಎಡಿಟಿಂಗ್ ಸೇರಿ ಡಿಐ ಜವಾಬ್ದಾರಿಯನ್ನು ರಿಶಿಕೇಷ್ ವಹಿಸಿಕೊಂಡಿದ್ದರಂತೆ. ಇದಕ್ಕೆ ಹಂತಹಂತವಾಗಿ 19 ಲಕ್ಷ ಹಣವನ್ನೂ ನಿರ್ಮಾಪಕರಿಂದ ಪಡೆದುಕೊಂಡಿದ್ದರಂತೆ ರಿಶಿಕೇಷ್. ಇಲ್ಲಿಯವರೆಗೂ ಶೂಟ್ ಮಾಡಿರುವ ಹಾರ್ಡ್ ಡಿಸ್ಕ್ ಕೊಡದೆ ಪರಾರಿ’ ಆಗಿದ್ದಾರೆ ಎಂದು ದೂರಿನಲ್ಲಿ (Complainant) ಉಲ್ಲೇಖಿಸಲಾಗಿದೆ. ನಿರ್ಮಾಪಕರು ಕರೆ ಮಾಡಿ ಕೇಳಿದರೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ನಿರ್ಮಾಪಕರು ಆರೋಪ ಮಾಡಿದ್ದಾರೆ. ಈ ಸಂಬಂಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.