ಬೆಂಗಳೂರು: ಸೆ.8ರಂದು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಸರ್ಕಾರ ನೂರು ದಿನ ಪೂರೈಸಿದರೂ ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ಕಾರಣವಾಗಿದೆ. ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟು ಜನಪರ ಕೆಲಸ ಮಾಡಲು ಈ ಹೋರಾಟ ಹಮ್ಮಿಕೊಂಡಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 11 ಗಂಟೆಗೆ ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬೃಹತ್ ಹೋರಾಟಕ್ಕೆ ಪ್ಲಾನ್ ಮಾಡಿದ್ದೇವೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದರು.