ರಾಮನಗರ: ಕಾವೇರಿ ನೀರು ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಸರಿಯಾಗಿ ನಿಭಾಯಿಸುತ್ತಿಲ್ಲ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಹಾಗೂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾವೇರಿ ನೀರು ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಸರಿಯಾಗಿ ನಿಭಾಯಿಸುತ್ತಿಲ್ಲ. ಕಾವೇರಿ ಕೊಳ್ಳದ ಜನರ ಬಗ್ಗೆ ಅವರಿಗೆ ಅರಿವಿಲ್ಲ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ನಮ್ಮ ನೀರು ಹರಿದುಬಿಟ್ಟಿದ್ದಾರೆ ಎಂದು ಕಿಡಿಕಾರಿದರು.