ಜಿ20 ವಿಶ್ವ ನಾಯಕರಿಂದ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ನಮನ

ನವದೆಹಲಿ: ಜಿ20 (G20) ಶೃಂಗಸಭೆಯ ಎರಡನೇ ದಿನವಾದ ಇಂದು ಜಾಗತಿಕ ನಾಯಕರು ನವದೆಹಲಿಯ ರಾಜ್ಘಾಟ್ನಲ್ಲಿರುವ (Rajghat) ಮಹಾತ್ಮ ಗಾಂಧಿ (Mahatma Gandhi) ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಮತ್ತು ಇತರ ನಾಯಕರು ಮತ್ತು ಪ್ರತಿನಿಧಿಗಳು ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ.

ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಜಿ20 ನಾಯಕರನ್ನು ಬರಮಾಡಿಕೊಂಡರು. ಬಳಿಕ ಬಾಪು ಕುಟಿಯ ಬಗ್ಗೆ ಪ್ರಧಾನಿ ಮಾಹಿತಿ ಹಂಚಿಕೊಂಡಿದ್ದಾರೆ. ಬಾಪು ಕುಟಿಯು ಮಹಾರಾಷ್ಟ್ರದ ವಾರ್ಧಾ ಬಳಿ ಇದೆ. ಇದು 1936 ರಿಂದ 1948ರ ಅವರ ಮರಣದವರೆಗೂ ಮಹಾತ್ಮ ಗಾಂಧಿಯವರ ನಿವಾಸವಾಗಿತ್ತು ಎಂದು ತಿಳಿಸಿದ್ದಾರೆ. ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಬಳಿಕ ನಾಯಕರು ಲೀಡರ್ಸ್ ಲಾಂಜ್ನಲ್ಲಿ ಶಾಂತಿ ಗೋಡೆಗೆ ಸಹಿ ಹಾಕಿದ್ದಾರೆ.

Loading

Leave a Reply

Your email address will not be published. Required fields are marked *