ಬೆಂಗಳೂರು;- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿದೆಡೆ ಸೆಪ್ಟೆಂಬರ್ 18ರ ತನಕ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರ ತನಕ ಮಳೆಯಾಗಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಸಹ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೇ ಬೆಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ ಸಂಜೆ ಸಾಧಾರಣ ಮಳೆಯಾಗುತ್ತಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಉಷ್ಣಾಂಶದಲ್ಲಿಯೂ ಇಳಿಕೆಯಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ವಿಜಯನಗರ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದೆ.