ಕೊಪ್ಪಳ: ಮನೆ ಮುಂದಿನ ಕಾಲುವೆಗೆ ಬಿದ್ದು 14 ತಿಂಗಳ ಗಂಡು ಮಗು ಸಾವನ್ನಪ್ಪಿದ ಧಾರುಣ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬಸವಣ್ಣ ಕ್ಯಾಂಪ್ನಲ್ಲಿ ನಡೆದಿದೆ. ವಿಜಯೇಂದ್ರ ಮೃತ ಮಗು. ಶಿವಾನಂದ ಹಾಗೂ ಶಿಲ್ಪಾ ದಂಪತಿಯ ಮಗು ಇದಾಗಿದ್ದು, ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಕಾಲುವೆಗೆ ಬಿದ್ದು ಸಾವನ್ನಪ್ಪಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.