ಬೆಂಗಳೂರು: ಶಿವಮೊಗ್ಗದಲ್ಲಿ ನಡೆದಿರುವುದು ಕೋಮುಗಲಭೆಯಲ್ಲ ಯಾರೋ ಮಾನಸಿಕ ಸ್ಥಿಮಿತ ಕಳೆದುಕೊಂಡವರು ಈ ರೀತಿ ಮಾಡಿದ್ದಾರೆ. ಉಳಿದ ಎಲ್ಲಾ ಕಡೆ ಹಬ್ಬ ಚೆನ್ನಾಗಿಯೇ ಆಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಹಾಗೂ ಈದ್ ಮಿಲಾದ್ ಎರಡು ಒಂದೇ ದಿನ ಇತ್ತು.
ಈ ಬಗ್ಗೆ ಸಭೆ ಮಾಡಿದ್ದೆವು. ಈ ವೇಳೆ ಮುಸ್ಲಿಂ ಬಾಂಧವರು ಭಾನುವಾರ ಮೆರವಣಿಗೆ ಮಾಡುವುದಾಗಿ ಹೇಳಿದ್ದರು. ಇಲ್ಲಿ ಒಂದೇ ರಸ್ತೆಯಲ್ಲಿ ಮೆರವಣಿಗೆ ಆಗುತ್ತದೆ. ಈ ವೇಳೆ ಹಿಂದೂ ಹಬ್ಬ ಆದರೆ ಮುಸ್ಲಿಮರು ಹೋಗ್ತಾರೆ. ಹಾಗೆಯೇ ಮುಸ್ಲಿಮರ ಹಬ್ಬ ಆದರೆ ಹಿಂದೂಗಳು ಹೋಗುತ್ತಾರೆ. ಈ ವೇಳೆ ಯಾರೋ ಒಂದೆರಡು ಜನ ಕಿಡಿಗೇಡಿಗಳು ಈ ರೀತಿ ಗಲಾಟೆ ಮಾಡಿದ್ದಾರೆ. ಮನೆಗಳಿಗೂ ನುಗ್ಗಿ ಗಲಭೆ ಮಾಡಿದ್ದಾರೆ. ಈ ರೀತಿ ಬರೀ ರಾಗಿಗುಡ್ಡದಲ್ಲಿ ಮಾತ್ರ ನಡೆದಿದೆ ಎಂದು ಅವರು ಹೇಳಿದ್ದಾರೆ.