ಗದಗ: ಮಗಳು ಪ್ರೀತಿಸಿ ಮದುವೆಯಾಗಿದಕ್ಕೆ ಮನನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ನಡೆದಿದೆ. ಸುನೀತಾ ನಾಯಕವಾಡಿ (48) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಶಿರೋಳ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿಯಾಗಿ ಕರ್ತವ್ಯ ಮಾಡ್ತಾಯಿದ್ದ ಮೃತ ಸುನೀತಾ, ಕಬ್ಬಿಣದ ಪೈಪ್ ಗೆ ಸೀರೆ ಕಟ್ಟಿ ಅದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲ್ಕು ತಿಂಗಳ ಹಿಂದೆ ಮೃತಳ ಮಗಳು ಸುಷ್ಮಾ ಅದೇ ಗ್ರಾಮದ ಪರಯ್ಯ ಹಿರೇಮಠ ಎನ್ನುವ ಯುವಕ ಜೊತೆಗೆ ಪ್ರೀತಿಸಿ ಮದುವೆಯಾಗಿದ್ದಳು. ಓಡಿ ಹೋಗಿ ಮದುವೆಯಾಗಿ ಬೆಂಗಳೂರಿನಲ್ಲಿ ವಾಸವಿದ್ದರು. ಆದ್ದರಿಂದ ಇದನ್ನೆ ಮನಸ್ಸಿಗೆ ಹಚ್ಚಿಕೊಂಡು, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಘಟನೆ ಸಂಭಂಧ ನರಗುಂದ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.