ಮಂಡ್ಯ : ಸಕ್ಕರೆನಾಡಿಲ್ಲಿ ಕಾವೇರಿ ಕಿಚ್ಚು ಇನ್ನೂ ಆರಿಲ್ಲ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ವಿರೋಧಿಸಿ ರೈತ ಸಂಘಟನೆಯಿಂದ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಲಾಗಿದೆ. ಕಾವೇರಿ ನದಿಗೆ ಎಳ್ಳು ಜೀರಿಗೆ ಬಿಟ್ಟು ವಿವಿಧ ಸಂಘಟನೆ ಕಾರ್ಯಕರ್ತರು ಆಕ್ರೋಶವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸ್ನಾನಘಟ್ಟದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ್ದಾರೆ. ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಮಂಡ್ಯದಲ್ಲಿ ರೈತ ಸಂಘಟನೆಗಳ ಕಿಚ್ಚು ಸ್ಫೋಟಗೊಂಡಿದೆ.