ಲಾಸ್ ಏಂಜಲೀಸ್ ನಿವಾಸದ ಬಾತ್ ಟಬ್ʼನಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ..!

ಲಾಸ್ ಏಂಜಲೀಸ್: ಫ್ರೆಂಡ್ಸ್ ನಟ ಮ್ಯಾಥ್ಯೂ ಪೆರ್ರಿ (54) (Matthew Perry) ತನ್ನ ನಿವಾಸದಲ್ಲಿರುವ ಹಾಟ್ಟಬ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಲಾಸ್ ಏಂಜಲೀಸ್ ಫೆಸಿಫಿಕ್ ಪಾಲಿಸೇಡ್ಸ್ ಮನೆಯ ಹಾಟ್ ಟಬ್ನಲ್ಲಿ (Hot Tub) ಪೆರ್ರಿಯವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಇದರಿಂದ ಗಾಬರಿಗೊಂಡು ಅವರನ್ನು ಎಬ್ಬಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಪೊಲೀಸರಿಗೆ ಸಂಜೆ 4 ಗಂಟೆ ಸುಮಾರಿಗೆ 911 ಕರೆ ಬಂದಿತು. ಮೇಲ್ನೋಟಕ್ಕೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವಂತೆ ಕಂಡುಬಂದಿದೆ. ಸ್ಥಳದಲ್ಲಿ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Loading

Leave a Reply

Your email address will not be published. Required fields are marked *