ಅಕಾಲಿಕ ಮಳೆಗೆ ತತ್ತರಿಸಿದ ರೈತ : ಅಪಾರ ಪ್ರಮಾಣದ ಬೆಳೆ ನಾಶ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಬುಧವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ಹಲವಡೆ ಗಾಳಿ, ಮಳೆಗೆ ಬೆಳೆಗಳು ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.

ವಿಜಯನಗರ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ಮರಗಳು ನೆಲಕ್ಕಿರುಳಿದಿದ್ದು, ನೂರಾರು ಎಕರೆ ಪ್ರದೇಶದಲ್ಲಿ‌ ಬೆಳೆದಿದ್ದ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ.

ಕಷ್ಟಪಟ್ಟು ಬೆಳೆದ ಬೆಳೆ ಅಕಾಲಿಕ ಮಳೆಗೆ ನೆಲಕಚ್ಚಿದ್ದು, ರೈತ ಕಂಗಾಲಾಗಿದ್ದಾನೆ.

ಕಲಬುರಗಿ ಜಿಲ್ಲೆಯಲ್ಲಿ ಸಂಜೆ ಬಾರಿ ಬಿರುಗಾಳಿ ಸಹಿತ ಮಳೆಯಾಗಿತ್ತು. ಈ ಕಾರಣ ನಗರದ ಕೋಟನೂರು ಡಿ ಬಡಾವಣೆಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಬೃಹತ್ ಮರವೊಂದು ಉರುಳಿ ಬಿದ್ದಿತ್ತು. ಗದಗ ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಮರ ಧರೆಗುರುಳಿ ಸಾರಿಗೆ ಸಂಸ್ಥೆಯ ಬಸ್ ಮೇಲೆ ಬಿದಿದ್ದಿತ್ತು. ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಬಳಿ ಘಟನೆ ನಡೆದಿತ್ತು. ಬಸ್​ನಲ್ಲಿದ್ದ ಯುವತಿಗೆ ಗಂಭೀರವಾದ ಗಾಯವಾಗಿದ್ದು, ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲು ಮಾಡಲಾಗಿತ್ತು.

Loading

Leave a Reply

Your email address will not be published. Required fields are marked *