ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಪೈಲಟ್ ರಹಿತ ತಪಸ್ ವಿಮಾನ(Tapas Flight) ಪತನಗೊಂಡಿದೆ. ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್ಡಿಒ(DRDO) ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನಗೊಂಡಿದೆ.
ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋನ್ ಮಾದರಿಯ ತಪಸ್ ವಿಮಾನ ನಿಯಂತ್ರಣ ತಪ್ಪಿ ವದ್ದಿಕೆರೆ ಬಳಿಯ ಜಮೀನಿನಲ್ಲಿ ಬಿದ್ದಿದೆ. ರೆಕ್ಕೆ ಕಳಚಿ ಪತನಗೊಂಡ ತಪಸ್ ವಿಮಾನ ನೋಡಲು ಜನ ಸೇರಿದ್ದಾರೆ.