ಬೆಂಗಳೂರು: 19ವರ್ಷದ ಯುವಕ ಡಬಲ್ ಬ್ಯಾರಲ್ ಗನ್ ನಿಂದ ಎದೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚಿಕ್ಕಬಾಣವರ ಬಳಿ ನಡೆದಿದೆ. ಕೊಡಗು ಮೂಲದ ವಿಶು ಉತ್ತಪ್ಪ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು, ವಿಶು ತಂದೆ ನೈಸ್ ಕಂಪನಿಯಲ್ಲಿ ಸೆಕ್ಯೂರಿಟಿ ಆಗಿ ಕೆಲಸ ಮಾಡ್ತಿದ್ರು. ತಂದೆಯ ಡಬಲ್ ಬ್ಯಾರಲ್ ಗನ್ ತಗೊಂಡು ಶೂಟ್ ಮಾಡಿಕೊಂಡು ಸೂಸೈಡ್ ಮಾಡಿಕೊಂಡಿದ್ದಾನೆ.
ಕೊಡಗು ಮೂಲದ ವಿಶು ಉತ್ತಪ್ಪ ಆರ್ ಆರ್ ಕಾಲೇಜಿನಲ್ಲಿ ಬಿಇ ಫಸ್ಟ್ ಇಯರ್ ವ್ಯಾಸಂಗ ಮಾಡ್ತಿದ್ದ. ಚಿಕ್ಕಬಿದರಕಲ್ಲು ಬಳಿಯ ತಿರುಮಲಪುರದಲ್ಲಿ ಘಟನೆ ನಡೆದಿದ್ದು, ನಿನ್ನ ಸಂಜೆ 6.30 ರ ಸುಮಾರಿಗೆ ಮನೆಯಲ್ಲೇ ಗುಂಡು ಹಾರಿಸಿಕೊಂಡಿದ್ದಾನೆ. ಈ ವೇಳೆ ಮನೆಯಿಂದ ಹೊರ ಹೋಗಿದ್ದ ಪೋಷಕರು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ 9 ಗಂಟೆ ಸುಮಾರಿಗೆ ಮನೆಗೆ ಬಂದಿದ್ದ ತಂದೆ ರವಿ ತಮ್ಮಯ್ಯ ಮಗನನ್ನ ಕಂಡು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಒಂದು ಗಂಟೆಗಳ ಚಿಕಿತ್ಸೆ ನೀಡಿ̧ದ್ರು, ಚಿಕಿತ್ಸೆ ಫಲಕಾರಿಯಾಗದೇ ವಿಶು ಉತ್ತಪ್ಪ ಸಾವನ್ನಪ್ಪಿದ್ದಾನೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ರಿಂದ ತನಿಖೆ ಮುಂದುವರಿದಿದ್ದು, ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ. ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗ್ತಿದೆ.