ದಾವಣಗೆರೆ: ಬಹು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಶಿಕ್ಷಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ಹಿರೇಉಡ ಗ್ರಾಮದ ನಿವಾಸಿ ಕೃಷ್ಣನಾಯ್ಕ್ (42) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ.
ಇವರು ಮೈಸೂರಿನಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಲ್ಲದೇ ಅನೇಕ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಇವರು, ನಾಲ್ಕು ದಿನಗಳ ಹಿಂದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೂ ಸಹ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಚನ್ನಗಿರಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.