ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಲಾರಿ ಮತ್ತು ಕಾರು ನಡುವೆ ಭೀಕರ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲಿಯೇ ಆರು ಜನ ದುರ್ಮರಣ ಹೊಂದಿದ್ದಾರೆ.
ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಈ ಘಟನೆ ನಡೆದಿದ್ದು, ಕಾರಿನ ಟೈರ್ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಈ ಪರಿಣಾಮ ಕಾರಿನಲ್ಲಿದ್ದ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನ ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಎಂದು ಗುರುತಿಸಲಾಗಿದೆ. ಇನ್ನು ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.