ಹುಲಿವೇಷ ಕುಣಿತದ ವೇಳೆ ಹುಲಿವೇಷಧಾರಿಯೊಬ್ಬ ಆಯ ತಪ್ಪಿ ಬಿದ್ದು ಗಂಭೀರ ಗಾಯ

 

ಮಂಗಳೂರು: ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನೊಬ್ಬನ ಕತ್ತಿಗೆ ಏಟು ಬಿದ್ದ ಘಟನೆಯೊಂದು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ (Mangaladevi Temple) ದೇವರ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಈ ಅವಘಡ ಸಂಭವಿಸಿದೆ. ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ಹುಲಿವೇಷಧಾರಿಯೊಬ್ಬ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯತಪ್ಪಿ ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದೆ.

ತಕ್ಷಣ ಆಸ್ಪತ್ರೆಗೆ ದಾಖಲಿಸಿ ಯುವಕನಿಗೆ ಚಿಕಿತ್ಸೆ ನೀಡಲಾಗಿದೆ. ಸದ್ಯ ಸಣ್ಣ ಗಾಯಗಳೊಂದಿಗೆ ಯುವಕ ಅಪಾಯದಿಂದ ಪಾರಾಗಿದ್ದಾರೆ. ನಿರಂತರ ಅಭ್ಯಾಸದ ಜೊತೆಗೆ ಹಲವು ವರ್ಷಗಳಿಂದ ಹುಲಿವೇಷ ಕಸರತ್ತು ನಡೆಸುತ್ತಿದ್ದರು. ಇದೀಗ ನವರಾತ್ರಿ ಹಿನ್ನೆಲೆ ಹುಲಿವೇಷ ಧರಿಸಿ ಕುಣಿತ ಮತ್ತು ಕಸರತ್ತು ಪ್ರದರ್ಶಿಸುವ ಸಂಪ್ರದಾಯವಿದೆ. ಅಂತೆಯೇ ಮಂಗಳಾದೇವಿ ದೇವರ ಎದುರು ಕಸರತ್ತು ನಡೆಸುತ್ತಿದ್ದ ವೇಳೆ ಭಾರೀ ಅವಘಡದಿಂದ ಪಾರಾಗಿದ್ದಾರೆ.

Loading

Leave a Reply

Your email address will not be published. Required fields are marked *