ಗಾಜಾದ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಹಮಾಸ್ ಉಗ್ರರ ಸುರಂಗ ಪತ್ತೆ..!

ಟೆಲ್‌ ಅವೀವ್‌: ಇಸ್ರೇಲ್‌ (Isreal) ಮೇಲೆ ದಾಳಿ ನಡೆಸಿದ ಬಳಿಕ ಹಮಾಸ್‌ ಉಗ್ರರು (Hamas Terrorist) ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದ್ದ ದೊಡ್ಡ ಸುರಂಗವೊಂದು ಗಾಜಾದ ಆಸ್ಪತ್ರೆಯಡಿ (Gaza Hospital) ಪತ್ತೆಯಾಗಿದೆ. ಈ ಸುರಂಗದ ವಿಡಿಯೋವನ್ನು ಇಸ್ರೇಲಿ ಸೇನೆ ಇಂದು ಬಿಡುಗಡೆ ಮಾಡುವ ಮೂಲಕ ಮೂಲಕ ಹಮಾಸ್‌ ಉಗ್ರರ ಕೃತ್ಯವನ್ನು ಬಹಿರಂಗ ಮಾಡಿದೆ.

 

 

 

ಇಸ್ರೇಲ್‌ ಸೇನೆ ಆಸ್ಪತ್ರೆಯ ಮೇಲೆ ಏರ್‌ ಸ್ಟ್ರೈಕ್‌ ಮಾಡುವ ಮೂಲಕ ಮಗ್ದ ಮಕ್ಕಳನ್ನು ಹತ್ಯೆ ಮಾಡುತ್ತಿದೆ ಎಂದು ಹಮಾಸ್‌ ಹೇಳಿತ್ತು. ಆದರೆ ಇಸ್ರೇಲ್‌ ಈ ಆರೋಪವನ್ನು ತಳ್ಳಿ ಹಾಕಿ, ಹಮಾಸ್‌ ಉಗ್ರರು ಆಸ್ಪತ್ರೆಯನ್ನು ರಕ್ಷಣಾ ಕವಚವನ್ನಾಗಿ ಮಾಡುತ್ತಿದ್ದಾರೆ ಎಂದು ಹೇಳಿತ್ತು. ಈಗ ಸುರಂಗದ ವಿಡಿಯೋವನ್ನು ಇಸ್ರೇಲ್‌ ಬಿಡುಗಡೆ ಮಾಡುವ ಮೂಲಕ ಹಮಾಸ್‌ ಉಗ್ರರ ಬಣ್ಣವನ್ನು ಬಯಲು ಮಾಡಿದೆ. ಗಾಜಾದಲ್ಲಿನ ರಾಂಟಿಸ್ಸಿ ಮಕ್ಕಳ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಹಮಾಸ್ ಸಂಗ್ರಹಿಸಿಟ್ಟಿರುವ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿರುವುದಾಗಿ ಇಸ್ರೇಲ್‌ ಸೈನ್ಯದ ವಕ್ತಾರ ಹೇಳಿಕೊಳ್ಳುವ ವೀಡಿಯೊ ಮತ್ತು ಫೋಟೋಗಳನ್ನು ಇಸ್ರೇಲಿ ಮಿಲಿಟರಿ ರಿಲೀಸ್‌ ಮಾಡಿದೆ.

Loading

Leave a Reply

Your email address will not be published. Required fields are marked *