ಕೊರೆವ ಚಳಿಯಲ್ಲೇ ತರಕಾರಿ ಗಾಡಿಯಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ..!

ಚಂಡೀಗಢ: ಹರಿಯಾಣದ ಅಂಬಾಲಾದ ಸರ್ಕಾರಿ ಆಸ್ಪತ್ರೆ (Haryana Hospital) ಆವರಣದಲ್ಲಿ ಮಹಿಳೆಯೊಬ್ಬರು ತರಕಾರಿ ತಳ್ಳುಗಾಡಿಯಲ್ಲೇ ಮಗುವಿಗೆ ಜನ್ಮವಿತ್ತ ಘಟನೆ ನಡೆದಿದೆ. ಚಳಿಯ ವಾತಾವರಣದಲ್ಲಿ ಮಹಿಳೆ (Woman) ಹಾಗೂ ಕುಟುಂಬಸ್ಥರು ಬೇಡಿಕೊಳ್ಳುತ್ತಿದ್ದರೂ ಯಾವೊಬ್ಬ ವೈದ್ಯರೂ ಸಹಾಯಕ್ಕೆ ಬರಲಿಲ್ಲ. ಕೊನೆಗೆ ಮಹಿಳೆ ಆಸ್ಪತ್ರೆ ಆವರಣದಲ್ಲಿ ಇರಿಸಲಾಗಿದ್ದ ತರಕಾರಿ ತಳ್ಳುಗಾಡಿಯಲ್ಲೇ (Vegetable Cart) ಮಗುವಿಗೆ ಜನ್ಮ ನೀಡಿದ್ದಾರೆ. ಅದಾದ ಕೆಲ ಸಮಯದ ನಂತರ ಆಕೆಯೆನ್ನ ಆಸ್ಪತ್ರೆಯೊಳಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂತ್ರಸ್ತ ಮಹಿಳೆ ಪಂಜಾಬ್‌ನ ಮೊಹಾಲಿ ಜಿಲ್ಲೆಯ ದಪ್ಪರ್‌ನ ನಿವಾಸಿಯಾಗಿದ್ದಾರೆ. ಇದ್ದಕ್ಕಿದ್ದಂತೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಪತಿ ಆಕೆಯನ್ನ ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದ್ರೆ ಅಂಗಲಾಚಿ ಬೇಡಿಕೊಂಡರೂ ಯಾವೊಬ್ಬ ವೈದ್ಯರೂ ಸಹಾಯಕ್ಕೆ ಬರಲಿಲ್ಲ. ಆಕೆಗೆ ಸ್ಟ್ರೆಚರ್‌ ಕೊಡುವುದಕ್ಕೂ ಸಿದ್ಧರಿರಲಿಲ್ಲ. ಕೊನೆಗೆ ಆಸ್ಪತ್ರೆ ಗೇಟ್‌ ಬಳಿಯೇ ತಳ್ಳುಗಾಡಿಯಲ್ಲಿ ಮಗುವಿಗೆ ಜನ್ಮವಿತ್ತಿದ್ದಾಳೆ.

ನಂತರ ವೈದ್ಯರು ಪ್ರಾಣಾಪಾಯವಾಗಬಹುದು ಎಂದು ಹೆದರಿ, ತಾಯಿ ಮತ್ತು ಮಗುವನ್ನು ಆಸ್ಪತ್ರೆಯೊಳಕ್ಕೆ ಕರೆದೊಯ್ದು ವಾರ್ಡ್‌ನಲ್ಲಿ ದಾಖಲಿಸಿದ್ದಾರೆ. ನಂತರ ಈ ಬಗ್ಗೆ ಮಾತನಾಡಿದ ಮಹಿಳೆಯ ಪತಿ, ಆ ದೇವರೇ ನನ್ನ ಪತ್ನಿ ಮತ್ತು ಮಗುವನ್ನು ರಕ್ಷಿಸಿದ್ದಾನೆ. ನಾನು ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಯನ್ನು ದೇವರೆಂದು ಭಾವಿಸಿದ್ದೆ, ಆದ್ರೆ ಇಲ್ಲಿನ ಘಟನೆ ನೋಡಿ ವೈದ್ಯರ ಮೇಲಿನ ನಂಬಿಕೆ ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇನ್ನೂ ಘಟನೆಯನ್ನು ರಾಜ್ಯ ಆರೋಗ್ಯ ಸಚಿವ ಅನಿಲ್ ವಿಜ್ ಅವರ ಗಮನಕ್ಕೆ ತರಲಾಗಿದ್ದು, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಸೂಚಿಸಿದ್ದಾರೆ.

Loading

Leave a Reply

Your email address will not be published. Required fields are marked *