ನವದೆಹಲಿ: 20 ವರ್ಷದ ಯುವಕ ತನ್ನೊಂದಿಗೆ ಅಸ್ವಾಭಾವಿಕ ಲೈಂಗಿಕತೆಗೆ ತಿರಸ್ಕರಿಸಿದ್ದಕ್ಕೆ ಸ್ನೇಹಿತನನ್ನೇ (Friend) ಕೊಲೆ ಮಾಡಿರುವ ಘಟನೆ ದೆಹಲಿಯ (Delhi) ಡಿಡಿಎ ಪಾರ್ಕ್ ಮೋರಿ ಗೇಟ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ (Uttar Pradesh) ಜಲೋನ್ ಜಿಲ್ಲೆಯ ರುದೂರಪುರ ಗ್ರಾಮದ ಪ್ರಮೋದ್ ಕುಮಾರ್ ಶುಕ್ಲಾ ಎಂದು ಗುರುತಿಸಲಾಗಿದೆ. ರಾಕೇಶ್ ತೋಮರ್ ಅವರ ಅಂಗಡಿಯಲ್ಲಿರುವ ಖೋಯಾ ಮಂಡಿಯಲ್ಲಿ ಪ್ರಮೋದ್ ಕೆಲಸ ಮಾಡುತ್ತಿದ್ದು, ಅಲ್ಲೇ ಪಕ್ಕದಲ್ಲಿದ್ದ ಮೋರಿ ಗೇಟ್ನಲ್ಲಿರುವ ರೈನ್ ಬಸೇರಾದಲ್ಲಿ ಗೆಳೆಯ ರಾಜೇಶ್ ಜೊತೆಗೆ ವಾಸಿಸುತ್ತಿದ್ದ.
ಪ್ರಮೋದ್ ಕೊಲೆಯ ಹಿಂದಿನ ದಿನ ಗೆಳೆಯರಿಬ್ಬರು ಜೊತೆಗೆ ಇದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಬಳಿಕ ಕಾಣೆಯಾಗಿದ್ದ ಆರೋಪಿ ರಾಜೇಶ್ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪ್ರಕರಣದ ಬಗ್ಗೆ ಬಾಯಿಬಿಟ್ಟಿದ್ದಾನೆ. ಸ್ನೇಹಿತನೊಂದಿಗೆ ಅಸ್ವಾಭಾವಿಕ ಸಂಭೋಗ ನಡೆಸುವಂತೆ ಒತ್ತಡ ನೀಡಿದ್ದ. ಆದರೆ ಅಸ್ವಾಭಾವಿಕ ಲೈಂಗಿಕತೆಯನ್ನು ಪ್ರಮೋದ್ ನಿರಾಕರಿಸಿದ್ದಾನೆ.
ಇದಕ್ಕೆ ಮತ್ತಷ್ಟು ಕೋಪಗೊಂಡ ರಾಜೇಶ್ ಜಗಳ ಮಾಡಿದ್ದಾನೆ. ನಂತರ ದಾರುಣವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡಿದ ನಂತರ ಪ್ರಮೋದ್ ಬಳಿ ಇದ್ದ 18,500 ರೂಪಾಯಿ ಮತ್ತು ಮೊಬೈಲ್ ಫೋನ್ ತೆಗೆದುಕೊಂಡು ಆರೋಪಿ ಪರಾರಿಯಾಗಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೇಶ್ನನ್ನು ಪೊಲೀಸರು ಬಂಧಿಸಿದ್ದಾರೆ.