“ಉಸಿರೇ ಉಸಿರೇ” ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ತಮ್ಮ ಹುಟ್ಟು ಹಬ್ಬದ ಹಿಂದಿನ ದಿನ ಈ ಚಿತ್ರದ ಡಬ್ಬಿಂಗ್ ಮುಗಿಸಿಕೊಟ್ಟಿದ್ದಾರೆ ಇದೊಂದು ನವೀರದ ಪ್ರೇಮಕಥೆ ಎನ್ನುವ ನಿರ್ಮಾಪಕ ಪ್ರದೀಪ್ ಯಾದವ್, ಇದು ನನ್ನ ಮೊದಲ ನಿರ್ಮಾಣದ ಚಿತ್ರ. ನಾನು ಚಿತ್ರ ನಿರ್ಮಾಣ ಮಾಡಲು ಕಿಚ್ಚ ಸುದೀಪ್ ಅವರೆ ಸ್ಪೂರ್ತಿ. ಅವರು ನನ್ನ ಬೆನ್ನೆಲುಬಾಗಿ ನಿಂತರು ಹಾಗೂ ಪ್ರಮುಖಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಸುದೀಪ್ ಅವರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತಾರೆ.
ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಎಲ್ಲಾ ಅಂದುಕೊಂಡ ಹಾಗೆ ಆದರೆ ಆಕ್ಟೋಬರ್ ನಲ್ಲಿ ತೆರೆಗೆ ಬರುವ ಸಾಧ್ಯತೆಗಳಿವೆ. “ಉಸಿರೇ ಉಸಿರೇ” ಚಿತ್ರದಲ್ಲಿ ಕಲಾವಿದರ ದಂಡೇ ಇದೆ. ರಾಜೀವ್ ಅವರಿಗೆ ನಾಯಕಿಯಾಗಿ ಶ್ರೀಜಿತ ನಟಿಸಿದ್ದಾರೆ. ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗಿನ ಖ್ಯಾತ ನಟರಾದ ಡಾ||ಆಲಿ ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತರು, ಅತೀ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಗಿನ್ನಿಸ್ ರೆಕಾರ್ಡ್ ಮಾಡಿರುವ ಬ್ರಹ್ಮಾನಂದಂ ಮೊದಲ ಬಾರಿಗೆ ನಮ್ಮ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ.
ಡೈನಾಮಿಕ್ ಸ್ಟಾರ್ ದೇವರಾಜ್, ಸಾಧುಕೋಕಿಲ, ಮಂಜು ಪಾವಗಡ, ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಶೈನಿಂಗ್ ಸೀತಾರಾಮು,ಜಗಪ್ಪ, ಸುಶ್ಮಿತಾ ಮುಂತಾದವರ ತಾರಾಬಳಗವಿದೆ ಎನ್ನುತ್ತಾರೆ ನಿರ್ದೇಶಕ ಸಿ.ಎಂ.ವಿಜಯ್. ಮನು ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದ್ದು, ವಿವೇಕ್ ಚಕ್ರವರ್ತಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.