ಮೈಸೂರು: ಮೈಸೂರಿನಲ್ಲಿ ಮತ್ತೊಂದು ಅಪಘಾತ ನಡೆದಿದೆ. ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಅಪಘಾತ ನಡೆದ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಮೈಸೂರಿನ ಜಲದರ್ಶಿನಿ ಪ್ರವಾಸ ಮಂದಿರದ ಬಳಿ ಘಟನೆ ನಡೆದಿದೆ. ಹುಣಸೂರಿನಿಂದ ಮೈಸೂರಿಗೆ ಬರುತಿದ್ದ ಸಂದರ್ಭ ಎರಡು ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ.
ಮುಂದೆ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ತಪ್ಪಿಸುವ ಸಲುವಾಗಿ ಒಂದು ಬಸ್ಸಿನ ಚಾಲಕ ಬ್ರೇಕ್ ಹಾಕಿದ್ದು, ಹಿಂಬದಿಯಿಂದ ಬಂದ ಮತ್ತೊಂದು ಬಸ್ ಈ ಬಸ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡೂ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಮುಖ, ಕೈಕಾಲುಗಳಿಗೆ ಗಾಯವಾಗಿದೆ. ಘಟನೆಯಿಂದ ಹುಣಸೂರು-ಮೈಸೂರು ರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.