ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಅಪಘಾತ: ಬ್ಯಾಟರಿ ಚಾಲಿತ ವಾಹನಕ್ಕೆ ಸಿಲುಕಿದ ಮಗು

ಆನೇಕಲ್: ಬ್ಯಾಟರಿ ಚಾಲಿತ ವಾಹನಕ್ಕೆ ಸಿಲುಕಿ ಮಗುವಿಗೆ ಗಂಭಿರ ಗಾಯಗಳಾಗಿರುವ ಘಟನೆ  ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. , ಬ್ಯಾಟರಿ ಚಾಲಿತ ವಾಹನಕ್ಕೆ ಮಗು ಸಿಲುಕಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದ ಝೂ ನಲ್ಲಿ ಕಳೆದ ಎರಡು ದಿನಗಳ ಹಿಂದೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ತ್ರಿಧರ್(3) ಅಪಘಾತಕ್ಕೊಳಗಾದ ಬಾಲಕ. ಬಿಜಾಪುರ ಮೂಲದ ದಂಪತಿಗಳ ಪುತ್ರ ಎನ್ನಲಾಗಿದೆ.

ಬನ್ನೇರುಘಟ್ಟ ಝೂ ನೋಡಲು ಕುಟುಂಬ ಬಂದಿತ್ತು. ಝನಲ್ಲಿ ರಸ್ತೆ ಬದಿಯಲ್ಲಿ ತಾಯಿ ಜೊತೆ ಮಗು ನಿಂತಿತ್ತು. ಎಂದಿನಂತೆ ಪ್ರವಾಸಿಗರನ್ನ ಕೂರಿಸಿಕೊಂಡು ಬ್ಯಾಟರಿ ಚಾಲಿತ ವಾಹನಗಳು ಸಂಚಾರ ಮಾಡಿವೆ. ಏಕಾಏಕಿ ರಸ್ತೆಗೆ ಓಡಿ ಮಗು ಬಂದಿದೆ.

ಈ ವೇಳೆ ಆಕಸ್ಮಿಕವಾಗಿ ಬ್ಯಾಟರಿ ಚಾಲಿತ ವಾಹನಕ್ಕೆ ಬಾಲಕ ಸಿಲುಕಿದ್ದಾನೆ. ಗಂಭೀರ ಗಾಯಗೊಂಡಿದ್ದ ಮಗುವನ್ನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರೈಂಬೋ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನ ಭರಿಸಿದೆ.

Loading

Leave a Reply

Your email address will not be published. Required fields are marked *