ಬೆಂಗಳೂರು : ಶನಿವಾರ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ-2023 ಪರೀಕ್ಷೆಗೆ ಹಾಜರಾಗುವ ಯಾವುದೇ ವಿದ್ಯಾರ್ಥಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಕಂಠೀರವ ಕ್ರೀಡಾಂಗಣದ ಸುತ್ತಮುತ್ತಲಿನ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಗೆ ಹಾಜರಾಗುವ ಯಾವುದೇ ವಿದ್ಯಾರ್ಥಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭದಿಂದ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಎಲ್ಲಾ ಅಭ್ಯರ್ಥಿಗಳು ಬೆಳಿಗ್ಗೆ 9:30 ರ ಮೊದಲು ಪರೀಕ್ಷಾ ಕೇಂದ್ರವನ್ನು ತಲುಪಲು ಮತ್ತು ಯಾವುದೇ ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಲು ನಾನು ವಿನಂತಿಸುತ್ತೇನೆ ಅಂಥ ಹೇಳಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಾನ ಮನಸ್ಕ ಪಕ್ಷಗಳ ನಾಯಕರನ್ನು ಕಾಂಗ್ರೆಸ್ ಆಹ್ವಾನಿಸಿದೆ. ಮೂಲಗಳ ಪ್ರಕಾರ, ಸಮಾನ ಮನಸ್ಕ ವಿರೋಧ ಪಕ್ಷಗಳು ಮತ್ತು ಅವುಗಳ ನಾಯಕರಾದ ಹೇಮಂತ್ ಸೊರೆನ್, ಸೀತಾರಾಮ್ ಯೆಚೂರಿ, ಉದ್ಧವ್ ಠಾಕ್ರೆ, ಶರದ್ ಪವಾರ್ ಮತ್ತು ಫಾರೂಕ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೂ ಆಹ್ವಾನ ಕಳುಹಿಸಲಾಗಿದೆ.