ವರಮಹಾಲಕ್ಷ್ಮಿ ಹಬ್ಬದ ಶುಭ ಕೋರಿ, ಮಾಧ್ಯಮದವರ ಕ್ಷಮೆ ಕೇಳಿದ ನಟ ದರ್ಶನ್

ಮಾಧ್ಯಮಗಳಿಗೆ ಹಿಗ್ಗಾಮುಗ್ಗಾ ಬೈದಿದ್ದ ನಟ ದರ್ಶನ್​, ಕೆಟ್ಟ ಕೆಟ್ಟ ಪದಗಳನ್ನು ಬಳಸಿದ್ರು ಅನ್ನೋ ಕಾರಣಕ್ಕೆ ಮಾಧ್ಯಮಗಳಲ್ಲಿ ದರ್ಶನ್​ ತೂಗುದೀಪ ಅವರ ಬಗ್ಗೆ ಯಾವುದೇ ಸುದ್ದಿಯನ್ನು ಮಾಡದೆ ನಿರ್ಬಂಧ ವಿಧಿಸಲಾಗಿತ್ತು.  ಈಗ ರಾಜ್ಯದ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಷಯಗಳನ್ನು ಕೋರಿದ ನಟ ದರ್ಶನ್ ಇದೇ ವೇಳೆ ಮಾದ್ಯಮವರಿಗೆ ಕ್ಷಮೇ ಕೋರಿ ಟ್ವೀಟ್​ ಹಂಚಿಕೊಂಡಿದ್ದಾರೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ ನಲ್ಲಿ ಸಮಸ್ತ  ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು

ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ, ಮಿತ್ರ ರಾಕ್ ಲೈನ್ ವೆಂಕಟಕೇಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆ.

ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರು ಗೊತ್ತಿಲ್ಲ ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ ಆ ವ್ಯಕ್ತಿ ಈರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ.

ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ, ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ. ಕನ್ನಡ, ಕನ್ನಡಿಗರು, ಕನ್ನಡ ನೆಲ ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ. ಪ್ರೀತಿಯಿರಲಿ, ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ.

 

Loading

Leave a Reply

Your email address will not be published. Required fields are marked *