ಬಾಲಿವುಡ್ ನಟ ವಿವೇಕ್ ಒಬೆರಾಯ್ ಗೆ ಕೋಟಿ ಕೋಟಿ ವಂಚನೆ ಮಾಡಲಾಗಿದ್ದು ಈ ಬಗ್ಗೆ ದೂರು ದಾಖಲಾಗಿದೆ. ಕಾರ್ಯಕ್ರಮ ಮತ್ತು ಸಿನಿಮಾಗೆ ಬಂಡವಾಳ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಕೊಡಲಾಗುವುದು ಎಂದು ಹೇಳಿ ಬರೋಬ್ಬರಿ 1.55 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ನಟ ವಿವೇಕ್ ಒಬೆರಾಯ್ ಅಕೌಂಟೆಂಟ್ ಅಂಧೇರಿಯಲ್ಲಿಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.
ವಿವೇಕ್ ಒಬೆರಾಯ್ ಅವರಿಂದ ಮೂವರು ಹಣ ಪಡೆದು ಸಿನಿಮಾ ಹಾಗೂ ಕಾರ್ಯಕ್ರಮ ಮಾಡುವುದಾಗಿ ಹೇಳಿ ಬಳಿಕ ಆ ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ. ಈ ಮೂವರಲ್ಲಿ ಒಬ್ಬರು ಸಿನಿಮಾ ನಿರ್ಮಾಪಕರು ಇದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಆರೋಪಿಗಳ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
ನಟ, ನಟಿಯರ ಹೆಸರಿನಲ್ಲಿ ಸಾಕಷ್ಟು ಭಾರಿ ವಂಚನೆ ಪ್ರಕರಣಗಳು ದಾಖಲಾಗುತ್ತಲೆ ಇರುತ್ತವೆ. ಕಳೆದ ಎರಡು ದಿನಗಳ ಹಿಂದಷ್ಟೇ ನಟ ಸಲ್ಮಾನ್ ಖಾನ್ ತಮ್ಮ ನಿರ್ಮಾಣ ಸಂಸ್ಥೆಯ ಹೆಸರಿನಲ್ಲಿ ಹಲವರು ಹಣ ಮಾಡುತ್ತಿದ್ದಾರೆ. ಆಡಿಷನ್ ಮಾಡುವುದಾಗಿ ಹೇಳಿ ಹಣ ಪಡೆದು ವಂಚಿಸುತ್ತಿದ್ದಾರೆ ಎಂದು ಹೇಳಿದ್ದು ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಇದೀಗ ಮತ್ತೊಬ್ಬ ಬಾಲಿವುಡ್ ನಟನಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.