ಬೆಂಗಳೂರು: ಕಾರ್ಯಕರ್ತರ ಆಶಯ, ಧ್ವನಿ, ರಾಜ್ಯ ನಾಯಕರ ಕರೆ, ರಾಷ್ಟ್ರೀಯ ನಾಯಕರ ಕರೆಗೆ ಸ್ಪಂದಿಸಿ ಬಿಜೆಪಿಗೆ ಮರಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,
ಕಾರ್ಯಕರ್ತರ ಆಶಯ, ಧ್ವನಿ, ರಾಜ್ಯ ನಾಯಕರ ಕರೆ, ರಾಷ್ಟ್ರೀಯ ನಾಯಕರ ಕರೆಗೆ ಸ್ಪಂದಿಸಿ ಬಿಜೆಪಿಗೆ ಮರಳಿದ್ದೇನೆ. ನೀವು ಹಿರಿಯ ನಾಯಕರು, ನಿಮಗೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ, ಗೌರವ ನೀಡುತ್ತೇವೆ ಎಂದು ಪಕ್ಷದ ಹಿರಿಯರು ತಿಳಿಸಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ, ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ಕೊಟ್ಟು ನಿನ್ನೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪುನರ್ ಸೇರ್ಪಡೆ ಆಗಿದ್ದೇನೆ. ರಾಷ್ಟ್ರೀಯ ನಾಯಕರು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿದ್ದೇನೆ. ನನ್ನ ಜೊತೆ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇತರ ನಾಯಕರು ಇದ್ದರು ಎಂದು ಹೇಳಿದರು.