ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ ಅದಿತಿ ಪ್ರಭುದೇವ ಅಭಿನಯದ “ಅಲೆಕ್ಸಾ”

ವಿ.ಚಂದ್ರು ನಿರ್ಮಾಣದ, ಜೀವ ನಿರ್ದೇಶನದ ಹಾಗೂ ಅದಿತಿ ಪ್ರಭುದೇವ ನಾಯಕಿಯಾಗಿ, ಪವನ್ ತೇಜ್ ನಾಯಕನಾಗಿ ನಟಿಸಿರುವ “ಅಲೆಕ್ಸಾ” ಚಿತ್ರ ಜನವರಿ 26 ಗಣರಾಜ್ಯೋತ್ಸವದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು “ಅಲೆಕ್ಸಾ” ಚಿತ್ರವನ್ನು ಡಿಸೆಂಬರ್ 29 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಅಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ಕಾಟೇರ” ಚಿತ್ರ ಬಿಡುಗಡೆಯಾಗುತ್ತಿರುವುದರಿಂದ ನಮ್ಮ ಚಿತ್ರದ ಬಿಡುಗಡೆಯನ್ನು ಜನವರಿ 26ಕ್ಕೆ ಮುಂದೂಡಿರುವುದಾಗಿ ನಿರ್ದೇಶಕ ಜೀವ ತಿಳಿಸಿದ್ದಾರೆ.

ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ವಿ.ಚಂದ್ರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಡಾ||ವಿ.ನಾಗೇಂದ್ರಪ್ರಸಾದ್ ಹಾಡುಗಳನ್ನು ಬರೆದಿದ್ದು, ಎ.ಪಿ.ಒ ಸಂಗೀತ ನೀಡಿದ್ದಾರೆ. ಸಾಯಿಸತೀಶ್ ಛಾಯಾಗ್ರಹಣ, ಉಮೇಶ್ ಸಂಕಲನ, ಚಂದ್ರು, ರಾಮು, ಕಲೈ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ಮಾಸ್ ಮಾದ, ವಿಕ್ರಮ್ ಮೋರ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಅದಿತಿ ಪ್ರಭುದೇವ ವಿಶೇಷ ತನಿಖಾಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ತೇಜ್ ನಾಯಕನಾಗಿ ಅಭಿನಯಿಸಿದ್ದಾರೆ‌. ನಾಗಿಣಿ ಧಾರಾವಾಹಿ ಖ್ಯಾತಿಯ ನಾಗಾರ್ಜುನ್, ಮೇಘಾಶ್ರೀ, ಹನುಮಂತೇಗೌಡ, ಚಂದ್ರಕಲಾ ಮೋಹನ್, ಮಿಮಿಕ್ರಿ ಗೋಪಿ, ಮೈಸೂರು ಮಲ್ಲೇಶ್ ಹಾಗೂ ಮನಮೋಹನ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Loading

Leave a Reply

Your email address will not be published. Required fields are marked *