ನವದೆಹಲಿ: ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಕೆ.ಮಿಶ್ರಾ ಮತ್ತು ಹಿರಿಯ ವಕೀಲ ಕೆ.ವಿ.ವಿಶ್ವನಾಥನ್ ಅವರ ಹೆಸರನ್ನ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೊಲಿಜಿಯಂ ಅನುಮೋದನೆ ನೀಡಿದೆ.
ಅಂದ್ಹಾಗೆ, ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂಗೆ ಶಿಫಾರಸು ಮಾಡಿತ್ತು.
ಸಧ್ಯ ಹಿರಿಯ ವಕೀಲ ಕೆ.ವಿ ವಿಶ್ವನಾಥನ್ ಅವರ ಹೆಸರನ್ನ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದನೆ ನೀಡಿದೆ.